ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ' ಒಕ್ಕೂಟದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 'ಅಹೋರಾತ್ರಿ ಧರಣಿ' ಆರಂಭಸಿದ್ದಾರೆ.

ಬೆಂಗಳೂರು, ಏಪ್ರಿಲ್ 21, 2025

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ' ಒಕ್ಕೂಟದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 'ಅಹೋರಾತ್ರಿ ಧರಣಿ' ಆರಂಭಸಿದ್ದಾರೆ. 

 ಗೌರವಾಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. 

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಏಪ್ರಿಲ್ 21ರಂದು ಹಲವು ಬೇಡಿಕೆಗಳ ಈಡೇರಿಕೆಗಾಗಿ 'ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ' ಒಕ್ಕೂಟದ ವತಿಯಿಂದ ಅಹೋರಾತ್ರಿ ಧರಣಿ' ನಡೆಯಲಿದೆ.

ರಾಜ್ಯಾದಾದ್ಯಂತ ಹಿಂದುಳಿದ ವರ್ಗದ ಪ್ರವರ್ಗ-1ಕ್ಕೆ ಸೇರಿದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ 46 ಜಾತಿಗಳನ್ನೊಳಗೊಂಡ ಅಲೆಮಾರಿ ಕುಟುಂಬಗಳು, ಹಲವಾರು ವರ್ಷಗಳಿಂದ ಬೀದಿ ಬದಿಗಳಲ್ಲಿ ಸರಕಾರಿ. ಖಾಸಗಿ ಖಾಲಿ ನಿವೇಶನಗಳಲ್ಲಿ ಗುಡಿಸಲು-ಗುಡಾರಗಳನ್ನು ಕಟ್ಟಿಕೊಂಡು ಜೀವನೋಪಾಯಕ್ಕಾಗಿ ಹಳ್ಳಿಗಳ ಮೇಲೆ ವ್ಯಾಪಾರಕ್ಕಾಗಿ ಬಾಂಡೆ ವ್ಯಾಪಾರ ಸೂಜಿ-ದಾರ. ಪಿನ್ನು, ಟೇಪು, ಬೀಗ ರಿಪೇರಿ ಮಾಡುವುದು. ದನ-ಕುರಿ-ಮೇಕೆ ಹಂದಿ ಸಾಕಾಣಿಕೆ, ಬಲೆ ಹೆಣೆಯುವುದು, ಮೀನು ಹಿಡಿದು ಮಾರುವುದು, ಧಾರ್ಮಿಕ ಬಿಕ್ಷಾಟನೆ, ಭವಿಷ್ಯ ಹೇಳುವುದು. ಗಿಣಿ ಭವಿಷ್ಯ ಹೇಳುವುದು, ಬಳೆ ಇತ್ಯಾದಿಗಳನ್ನು ಮಾರುತ್ತಾ ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ಕಷ್ಟಕರ ಜೀವನವನ್ನು ನಡೆಸುತ್ತಿದ್ದಾರೆ.

ಬಹಳ ಮುಖ್ಯವಾಗಿ ನಮ್ಮ ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸರ್ಕಾರಿ ಜಾಗದಲ್ಲಿ ಸುಮಾರು 10 ವರ್ಷಗಳಿಂದ ಮೇಲ್ಪಟ್ಟು ಗುಡಿಸಲು ಡೇರೆ ಟೆಂಟ್ ಹಾಕಿಕೊಂಡು ವಾಸಿಸುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ಆ ಜಾಗವನ್ನು ಅವರ ಹೆಸರಿಗೆ ಪಹಣಿ ಪತ್ರವನ್ನು ನೀಡುವುದು ಹಾಗೂ ಈ ಜನರಿಗೆ ರುದ್ರಭೂಮಿಗಾಗಿ ಸರ್ಕಾರಿ ಜಾಗವನ್ನು ಕಾಯ್ದಿರಿಸುವುದು, ಅಲೆಮಾರಿ ಜನರು ಹೆಚ್ಚಾಗಿ ವಾಸಿಸುತ್ತಿರುವ ನಮ್ಮ ರಾಜ್ಯದ ಜಿಲ್ಲೆಗಳಲ್ಲಿ ಅಲೆಮಾರಿ ಸಮುದಾಯ ಭವನಗಳನ್ನು ನಿರ್ಮಿಸುವುದು. ಈ ಜನಾಂಗದ ಮಕ್ಕಳಿಗಾಗಿ ವಸತಿ ಶಾಲೆಗಳನ್ನು ತೆರೆಯುವುದು. ಅಲ್ಲದೆ ಈ ಜನಾಂಗದವರಿಗೆ ಇಲಾಖೆ ನೀಡುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಗಳಿಗೆ ನೀಡುವ ಶಾಲಾ ವರ್ಗಾವಣಾ ಪತ್ರದಲ್ಲಿ ಅವರ ಹೆಸರಿನ ಜೊತೆಗೆ ಜಾತಿ ಮತ್ತು ಪ್ರವರ್ಗವನ್ನು ಗುರುತಿಸಬೇಕು ಅಲ್ಲದೆ ಈ ಜನಾಂಗದವರಿಗೆ ಹೆಚ್ಚಿನ ಮೀಸಲಾತಿಯನ್ನು ನೀಡಬೇಕು. ಪ್ರತಿಷ್ಠಿತ ಖಾಸಗಿ ಕಾಲೇಜುಗಳಿಲ್ಲಿ ಅಲೆಮಾರಿ ವಿದ್ಯಾರ್ಥಿಗಳಿಗೆ ಯಾವುದೇ ತಾರತಮ್ಯ ಮಾಡದೆ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು. NEET ಮತ್ತು CET ಪರೀಕ್ಷೆಗೆ ಪರಿಶಿಷ್ಟ ಜಾತಿ/ಪಂಗಡ ವಿದ್ಯಾರ್ಥಿಗಳಿಗೆ ನೀಡುವ ಮಾನದಂಡವನ್ನು ನಮ್ಮ ವಿದ್ಯಾರ್ಥಿಗಳಿಗೂ ನೀಡಬೇಕು. ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ಕೂಡಲೇ ನೇಮಕಾತಿ ಮಾಡಿ ಹೆಚ್ಚಿನ ಅನುದಾನ ನೀಡಬೇಕು.

ಸನ್ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ 2024-2025ರ ಆಯವ್ಯಯದ ಪುಟ ಸಂಖ್ಯೆ 14. ಚುಕ್ಕೆ ಗುರುತು 2 ರಲ್ಲಿ ಸೂಚಿಸಿದಂತೆ ಅಲೆಮಾರಿ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಏಕಲವ್ಯ ಮಾದರಿಯ ವಸತಿ ಶಾಲೆಯಲ್ಲಿ 20 ಸೀಟು ಮೀಸಲು ಹಾಗೂ ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶ ಸ್ಥಾಪನೆ ಮತ್ತು ಪುಟ ಸಂಖ್ಯೆ 14ರ ಹಿಂದುಳಿದ ವರ್ಗಗಳ ಕಲ್ಯಾಣದ ಚುಕ್ಕೆ ಗುರುತು 5ರಲ್ಲಿ ಅಲೆಮಾರಿ, ಅರೆಅಲೆಮಾರಿ ಸ್ಥಿತಿಗತಿ ಅಧ್ಯಯನಕ್ಕಾಗಿ, ಅಭಿವೃದ್ಧಿಗಾಗಿ ಕರ್ನಾಟಕ ಅಲೆಮಾರಿ ಆಯೋಗ ರಚನೆ ಎಂದು ಸೂಚಿಸಿರುವುದು ಕೇವಲ ಆಯವ್ಯಯದ ಮುಖ್ಯಾಂಶಗಳಿಗೆ ಸೀಮಿತವಾಗಿದೆ ಹೊರತು ಅದು ಇಷ್ಟರವರೆಗೂ ಅನುಷ್ಠಾನಗೊಳ್ಳಲಿಲ್ಲ. ಸರಕಾರ ಈ ಮೇಲಿನ ಎಲ್ಲ ಅಂಶಗಳನ್ನು ನಮ್ಮ ಅಲೆಮಾರಿ/ಅರೆ ಆಲೆಮಾರಿ ಜನಾಂಗಗಳ ಕ್ಷೇಮಾಭಿವೃದ್ಧಿಗಾಗಿ ಕೂಡಲೇ ಅನುಷ್ಟಾನಗೊಳಿಸಬೇಕೆಂದು ಒಕ್ಕೂಟದ ವತಿಯಿಂದ ವಿನಂತಿಸುತ್ತೇವೆ.

(ಪ್ರತಿಭಟನೆಯಲ್ಲಿ ಕೆ. ರವೀಂದ್ರ ಶೆಟ್ಟಿ, ಮಂಗಳೂರು, ಗೌರವಾಧ್ಯಕ್ಷರು, ಪ್ರಕಾಶ್ ಎಂ. ಬೆಂಗಳೂರು, ರಾಜ್ಯಾಧ್ಯಕ್ಷರು, ಪ್ರತಾಪ್‌ ಕುಮಾರ್ ಒ., ಚಿತ್ರದುರ್ಗ, ಪ್ರಧಾನ ಕಾರ್ಯದರ್ಶಿ, ಶ್ರೀನಿವಾಸ ಕಟ್ಟಿಮನಿ, ಕೊಪ್ಪಳ, ಪ್ರದಾನ ಸಂಚಾಲಕರು, ಬಿ.ಎನ್.ನಾರಾಯಣ ಸ್ವಾಮಿ, ಬೆಂಗಳೂರು, ಗೌರವ ಸಲಹೆಗಾರರು, ನಾರಾಯಣ ಸ್ವಾಮಿ, ಅಧ್ಯಕ್ಷರು, ಗ್ರಾಮಾಂತರ ಜಿಲ್ಲೆ, ಕುಮಾರ್ ವೈ, ಮೈಸೂರು ಉಪಸ್ಥಿತರಿದ್ದರು)

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium