ಸಿ.ಇ.ಟಿ ಪರೀಕ್ಷೆ ಬರೆಯಲು ಹೋಗಿದ್ದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳ ನಡೆಯನ್ನು 'ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ' ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿದರು.


ಬೆಂಗಳೂರು, ಏಪ್ರಿಲ್ 19, 2025 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ' ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 


ಈ ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾಧ್ಯಕ್ಷರಾದ ಎಸ್. ರಘುನಾಥ್ ಅವರು ಮಾತನಾಡಿದರು. 

ಸಿ.ಇ.ಟಿ ಪರೀಕ್ಷೆ ಬರೆಯಲು ಹೋಗಿದ್ದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳ ನಡೆಯನ್ನು 'ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ' ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿದರು.

ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಬೀದರ್ ನಗರಗಳಲ್ಲಿ ಸಿ.ಇ.ಟಿ. ಪರೀಕ್ಷೆ ನಡೆಯುತ್ತಿರುವಾಗ ನಮ್ಮ ಬ್ರಾಹ್ಮಣ ಜನಾಂಗದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವಾಗ ಅವರನ್ನು ತಪಾಸಣೆಗೆ ಒಳಪಡಿಸಿ, ಅವರು ಧರಿಸಿದ್ದ ಯಜ್ಯೋಪವೀತ (ಜನಿವಾರ) ವನ್ನು ಸಿ.ಇ.ಟಿ. ಪರೀಕ್ಷಾಧಿಕಾರಿಗಳು ತೆಗೆಸಿ, ಕತ್ತರಿಸಿ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇದರ ವಿರುದ್ಧವಾಗಿ ಬ್ರಾಹ್ಮಣ ಮುಖಂಡರು ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಪ್ರತಿಭಟನೆ ಮಾಡಿ, ಖಂಡಿಸಿರುತ್ತಾರೆ. ನಾವೂ ಸಹ ಈ ಘಟನೆಯನ್ನು ಖಂಡಿಸುತ್ತೇವೆ. ಸರ್ಕಾರವು ಸಿ.ಇ.ಟಿ. ಪರೀಕ್ಷಾಧಿಕಾರಿಗಳನ್ನು ಈ ಕೂಡಲೆ ಅಮಾನತುಗೊಳಿಸಿ, ಬೇಷರತ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತಿದ್ದೇವೆ. ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣವಾದ ಶಿಸ್ತುಕ್ರಮವನ್ನು ತೆಗೆದುಕೊಂಡು ಮಾಹಿತಿಯನ್ನು ನಮ್ಮ ಮಹಾಸಭಾಗೆ ತಿಳಿಸಬೇಕೆಂದು ಕೋರುತ್ತೇವೆ.

ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಕೆಲವರಿಗೆ ಅಭ್ಯಾಸವಾಗಿ ಬಿಟ್ಟಿದೆ. ಬ್ರಾಹ್ಮಣರು ಈಗ ಅಲ್ಪಸಂಖ್ಯಾತರಾಗಿದ್ದಾರೆ, ಹಾಗಾಗಿ ಕೆಲವು ವಿಕೃತಿ ಮನಸ್ಸುಳ್ಳವರು ಬ್ರಾಹ್ಮಣರ ಮೇಲೆ ಆಕ್ರಮಣ ಮಾಡುವುದು ವಾಡಿಕೆಯಾಗಿದೆ. ಸರ್ಕಾರವು ಸಂವಿಧಾನಾತ್ಮಕವಾಗಿ ಬ್ರಾಹ್ಮಣರಿಗೆ ಸಮಾನತೆಯನ್ನು ನೀಡುವುದರಲ್ಲಿ ತಾರತಮ್ಯ ತೋರುತ್ತಿರುವುದು ಎದ್ದು ಕಾಣುತ್ತಿದೆ.

 ಹಾಗಾಗಿ ಬ್ರಾಹ್ಮಣ ಸಮುದಾಯದ ಮೇಲೆ ತಿಳಿಗೇಡಿಗಳು ಯಾವುದೇ ದುಷ್ಕೃತ್ಯಗಳು, ನಿರಂತರವಾಗಿ ಅವಹೇಳನ ಮಾಡುವುದು ನಡೆಯದಂತೆ ಸರ್ಕಾರವು ಎಲ್ಲಾ ರೀತಿಯ ಸುರಕ್ಷತೆಯನ್ನು ಕಲ್ಪಿಸಿಕೊಡಬೇಕಾಗಿ ಒತ್ತಾಯಿಸುತ್ತಿದ್ದೇವೆ.

ಕಾಂತರಾಜ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿರುತ್ತೆ. ಅದರಲ್ಲಿ ಬ್ರಾಹ್ಮಣ ಸಮಾಜದ ಜನಗಣತಿ 17,83,427 ಅಂದರೆ 2.98% ಎಂಬುದಾಗಿ ತೋರಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ನಮ್ಮ ಮಾಹಿತಿ ಪ್ರಕಾರ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ ಎಂಬ ಸಂದೇಹವಿದೆ ಮತ್ತು ಬಹುತೇಕ ಮನೆಗಳನ್ನು ಸಂಪರ್ಕಿಸಿಲ್ಲ ಎಂಬ ಮಾಹಿತಿ ಬಂದಿದೆ. ಈ ವರದಿ ಬಿಡುಗಡೆ ಬಗ್ಗೆ ಎಲ್ಲೆಡೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ. ನಮ್ಮ ಬ್ರಾಹ್ಮಣ ಸಮುದಾಯದ ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ ಎಂದು ನಾವು ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಅಲ್ಲದೆ ವೈಜ್ಞಾನಿಕವಾಗಿ ಮತ್ತೊಮ್ಮೆ ಜಾತಿ ಜನಗಣತಿ ನಡೆಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಸದರಿ ಕಾಂತರಾಜ ಆಯೋಗದ ವರದಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯು ತಿರಸ್ಕರಿಸಬೇಕೆಂದು ಮನವಿ ಮಾಡುತ್ತಿದೆ ಹಾಗೂ ನಮ್ಮ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೋರುತ್ತೇವೆ.


Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium