ಬೆಂಗಳೂರಿನ ಸಚಿವಾಲಯ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ ಎಎಸ್ಟಿ ನೌಕರರ ಸಮನ್ವಯ ಸಮಿತಿ' ವತಿಯಿಂದ "ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತೋತ್ಸವ" ನಡೆಯಿತು.


ಬೆಂಗಳೂರು, ಮೇ 2, 2025

ಬೆಂಗಳೂರಿನ ಸಚಿವಾಲಯ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ ಎಎಸ್ಟಿ ನೌಕರರ ಸಮನ್ವಯ ಸಮಿತಿ' ವತಿಯಿಂದ "ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತೋತ್ಸವ" ಮತ್ತು "ಸ್ಮರಣ ಸಂಚಿಕೆ ಬಿಡುಗಡೆ" ಕಾರ್ಯಕ್ರಮ ನಡೆಯಿತು. 

ಈ ಕಾರ್ಯಕ್ರಮವನ್ನು ಡಾ. ಪುರುಷೋತ್ತಮ್ ಬಿಳಿಮಲೆ ಅವರು ಉದ್ಘಾಟನೆ ಮಾಡಿದರು. ಸ್ಮರಣ ಸಂಚಿಕೆಯನ್ನು ಎನ್. ಎಮ್. ನಾಗರಾಜ್ ಅವರು ಬಿಡುಗಡೆ ಮಾಡಿದರು. 

ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ ಎಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವಶಂಕರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅನೇಕ ಸಾಧಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. 

 ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ ಎಎಸ್ಟಿ ನೌಕರರ ಸಮನ್ವಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.