ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವವು ಮೇ 15ರಂದು ನಡೆಯಲಿದೆ

ಬೆಂಗಳೂರು, ಮೇ 14, 2025 

'ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವವು ಮೇ 15ರಂದು ನಡೆಯಲಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ.ಸುರೇಶ ಅವರು ತಿಳಿಸಿದರು. 

 2023-24ನೇ ಸಾಲಿನಲ್ಲಿ ಉತ್ತೀರ್ಣರಾದ 1,271 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುತ್ತದೆ' ಎಂದು ಎಸ್.ವಿ.ಸುರೇಶ ಅವರು ಮಾಹಿತಿ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, '871 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಪದವಿ, 311 ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ 89 ವಿದ್ಯಾರ್ಥಿಗಳಿಗೆ ಪಿಎಚ್‌.ಡಿ ಪದವಿಗಳನ್ನು ನೀಡಲಾಗುತ್ತದೆ' ಎಸ್. ಸುರೇಶ ಅವರು ತಿಳಿಸಿದರು.

'ಬೆಳಿಗ್ಗೆ 11ಕ್ಕೆ ಜಿಕೆವಿಕೆ ಆವರಣದಲ್ಲಿರುವ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರಚಂದ್ ಗೆಹಲೋತ್‌ ವಹಿಸಲಿದ್ದಾರೆ. ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಭಾಗವಹಿಸಲಿದ್ದು, ಇನ್ನೊ ವ್ಯವಸ್ಥಾಪಕ ನಿರ್ದೇಶಕ ಯು.ಎಸ್‌. ಅವಸ್ಥಿ ಅವರು ಘಟಿಕೋತ್ಸವದ ಪ್ರದಾನ ಭಾಷಣ ಮಾಡಲಿದ್ದಾರೆ' ಎಂದರು. 

'ಪಿಎಚ್.ಡಿಯಲ್ಲಿ ಒಟ್ಟು 30 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು. 13 ವಿದ್ಯಾರ್ಥಿನಿಯರು ಹಾಗೂ 3 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯ ನೀಡುವ 14 ಚಿನ್ನದ ಪದಕಗಳು, 10 ದಾನಿಗಳ ಚಿನ್ನದ ಪದಕಗಳು, 5 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣಪತ್ರಗಳನ್ನು ಹಾಗೂ ಒಂದು ಆವರಣ ಚಿನ್ನದ ಪದಕವನ್ನು ಪಡೆಯಲಿದ್ದಾರೆ ಎಂದು ಸುರೇಶ ಅವರು ತಿಳಿಸಿದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium