ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರ್ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ "ನಾಡಪ್ರಭು ಕೆಂಪೇಗೌಡರ 516ನೇ ಜನ್ಮದಿನೋತ್ಸವ" ಕಾರ್ಯಕ್ರಮ ನಡೆಯಿತು.

ಬೆಂಗಳೂರು, ಜೂನ್ 27, 2025

ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರ್ ಗ್ರಾಂಡ್ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ "ನಾಡಪ್ರಭು ಕೆಂಪೇಗೌಡರ 516ನೇ ಜನ್ಮದಿನೋತ್ಸವ" ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಮಾಜಿ ಡಿಸಿಎಎಂ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶ್ವತ್ ನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. 

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಇಂದು ಬೃಹತ್ ಬೆಂಗಳೂರು ನಿರ್ಮಾಣವಾಗಿದೆ. ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಬೇಕು. 
ನಾಡಿಗೆ ಹಾಗೂ ಬೆಂಗಳೂರಿಗೆ ಅವರ ಕೊಡುಗೆ ಅವಿಸ್ಮರಣೀಯ ಎಂದುಅಶ್ವತ್ ನಾರಾಯಣ ಅವರು ಹೇಳಿದರು. 

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹಲೊಟ್, 
ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, 
 ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕರಾ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಪಿ ಸಿ ಮೋಹನ್, ಡಾ ಸಿ ಎನ್ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium