ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿ & ಅರೆವೈದ್ಯಕೀಯ ಮಂಡಳಿ-ಬೆಂಗಳೂರು' ವತಿಯಿಂದ ಡಿಪ್ಲೋಮಾ ಇನ್ ನರ್ಸಿಂಗ್ & ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಟ್ಯಾಬ್ ವಿತರಣಾ ಸಮಾರಂಭ" ನಡೆಯಿತು.


ಬೆಂಗಳೂರು, ಜೂನ್ 13, 2025

'ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿ ಹಾಗೂ ಅರೆವೈದ್ಯಕೀಯ ಮಂಡಳಿ-ಬೆಂಗಳೂರು' ವತಿಯಿಂದ ಬಿ.ಎಂ.ಸಿ.ಆರ್.ಐ ಸಭಾಂಗಣದಲ್ಲಿ "ಡಿಪ್ಲೋಮಾ ಇನ್ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಪರೀಕ್ಷೆಗಳಲ್ಲಿ ರಾಜ್ಯದ ವಿಭಾಗವಾರು ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಟ್ಯಾಬ್ ವಿತರಣಾ ಸಮಾರಂಭ" ನಡೆಯಿತು.

ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾದ ಮೊಹಮ್ಮದ್ ಮೊಹಸಿನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ|| ಸುಜಾತ ರಾಥೋಡ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

ವಿಶೇಷ ಆಹ್ವಾನಿತರಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಯಾದ ಡಾ ವೆಂಕಟೇಶ ಮೂರ್ತಿ ಹಾಗೂ BMCRI ನ ನಿರ್ದೇಶಕರು ಹಾಗೂ ದೀನ್ ಆದ ಡಾ ರಮೇಶ್ ಕೃಷ್ಣ. ಕೆ ಅವರು ಭಾಗಿಯಾಗಿದ್ದರು. 

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ
ಡಿಪ್ಲೋಮಾ ಇನ್ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಪರೀಕ್ಷೆಗಳಲ್ಲಿ ರಾಜ್ಯದ ವಿಭಾಗವಾರು ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium