'ಶಕ್ತಿ ಯೋಜನೆ' ಯಿಂದ ರಾಜ್ಯದಲ್ಲಿ ಮಹಿಳೆಯರ ಸಬಲೀಕರಣ ಸಾಧ್ಯವಾಗಿದೆ - ಎಲ್. ಜಯರಾಮ್
'ಶಕ್ತಿ ಯೋಜನೆಯ 500 ಕೋಟಿ ಮಹಿಳಾ ಪ್ರಯಾಣಿಕರ ದಾಖಲೆ' ಹಿನ್ನಲೆ ಬೆಂಗಳೂರಿನ ಕೆ.ಆರ್. ಪುರ ಬಸ್ ನಿಲ್ದಾಣದ ಮುಂದೆ ಬಿಎಂಟಿಸಿ ಬಸ್ ಗೆ ಪೂಜೆ ಹಾಗೂ ಪ್ರಯಾಣಿಕರಿಗೆ ಸಿಹಿ ಹಂಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೆ. ಆರ್. ಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎಲ್. ಜಯರಾಮ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಬಿಎಂಟಿಸಿ ಚಾಲಕರಿಗೆ ನಿರ್ವಾಹಕರಿಗೆ ಪ್ರಯಾಣಿಕರಿಗೆ ಸಿಹಿ ಹಂಚಿ ಶಕ್ತಿ ಯೋಜನೆಯ ಸಂಭ್ರಮಾಚರಣೆಯನ್ನು ಮಾಡಲಾಯಿತು.
Comments
Post a Comment