ಬೆಂಗಳೂರಿನ ರಾಜಾಜಿನಗರದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.
ಬೆಂಗಳೂರಿನ ರಾಜಾಜಿನಗರದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್ ಅವರು ಉಪಸ್ಥಿತರಿದ್ದರು.
ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ವಿಶ್ವಗುರು ಬಸವಣ್ಣನವರ ಸಿದ್ಧಾಂತಗಳು ಮತ್ತು ಬದುಕಿನ ಮೌಲ್ಯಗಳು ನಮ್ಮ ನಾಡಿನ ಹೆಮ್ಮೆ. ಈ ಪುತ್ಥಳಿ ಅವರ ತತ್ವಗಳನ್ನು ಮತ್ತಷ್ಟು ಜನರ ಮನಸ್ಸಿಗೆ ತಲುಪುವಂತೆ ಮಾಡಲಿ ಎಂದು ಆಶಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಜತೆಗೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಮಾತನಾಡಿದರು. ಬಸವಣ್ಣನವರ ತತ್ವ-ಆದರ್ಶಗಳನ್ನು ಪಾಲಿಸುವ ಮೂಲಕ ಸಮಾನತೆಯ ಸಮಾಜವನ್ನು ನಿರ್ಮಿಸಲು ಎಲ್ಲರಿಗೂ ಮನವಿ ಮಾಡಿದರು.
ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆ ಇವೇ ಬಸವತತ್ವದ ಸಾರ. 12ನೇ ಶತಮಾನದಲ್ಲೇ ಶ್ರೇಣಿರಹಿತ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ವಚನಗಳಲ್ಲಿ ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ ಎಂದು ಈಶ್ವರ್ ಖಂಡ್ರೆ ಅವರು ತಿಳಿಸಿದರು.
ನವ ಕರ್ನಾಟಕ ನಿರ್ಮಾಣ ಹಾಗೂ ನವ ಭಾರತ ನಿರ್ಮಾಣದ ದಾರಿಯಲ್ಲಿ ಬಸವತತ್ವ ನಮ್ಮ ಶಾಶ್ವತ ದಾರಿದೀಪ ಎಂದು ಈಶ್ವರ್ ಖಂಡ್ರೆ ಅವರು ಹೇಳಿದರು.
Comments
Post a Comment