ಮನೀಶ್ ಗುರೂಜಿ ಹಾಗೂ ಅವರ ಸಹಚರರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರು ನಗರ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಒತ್ತಾಯಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಬೆಂಗಳೂರು ವಕೀಲರ ಸಂಘ'ದಿಂದ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಮಾತನಾಡಿದರು.

 ಬೆಂಗಳೂರು ವಕೀಲರ ಸಂಘದ ಸದಸ್ಯರಾದ ಗಿರೀಶ್ ಎಂಬುವರ ಮೇಲೆ 4-10-2025ರಂದು ಗೊರೂರು ಬಳಿ ಶ್ರೀ ಚಾಮುಂಡೇಶ್ವರಿ ಪೀಠದ ಮನೀಶ್ ಗುರೂಜಿ ಹಾಗೂ ಅವರ ಸಹಚರರು ಹಲ್ಲೆ ಮಾಡಿದ್ದಾರೆ ಎಂದು ವಿವೇಕ್ ಸುಬ್ಬಾರೆಡ್ಡಿ ಅವರು ಆರೋಪಿಸಿದರು. 

 ಕ್ಷುಲ್ಲಕ ಕಾರಣಕ್ಕೆ ಮನೀಶ್ ಗುರೂಜಿ ಹಾಗೂ ಅವರ ಸಹಚರರು ವಕೀಲರಾದ ಗಿರೀಶ್ ಹಾಗೂ ಅವರ ಕುಟುಂಬಸ್ಥರನ್ನು ಮನಬಂದಂತೆ ತಥಳಿಸಿದ್ದಾರೆ ಎಂದು ವಿವೇಕ್ ಸುಬ್ಬಾರೆಡ್ಡಿ ಅವರು ಮಾಧ್ಯಮಗಳಿಗೆ ತಿಳಿಸಿದರು. 

 ಈ ಸಂಬಂಧ ವಕೀಲರದ ಗಿರೀಶ್ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದ ಸಂದರ್ಭದಲ್ಲಿ ಪೊಲೀಸರು ಸಹ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ವಿವೇಕ್ ಸುಬ್ಬಾರೆಡ್ಡಿ ಅವರು ಆರೋಪಿಸಿದರು. 

 ವಕೀಲರಾದ ಗಿರೀಶ್ ಅವರ ಮೇಲೆ ನಡೆದ ಹಲ್ಲೆ ಸಂಬಂಧ ಪ್ರಕರಣ ದಾಖಲಾಗಿದ್ದು, ಮನೀಶ್ ಗುರೂಜಿ ಹಾಗೂ ಅವರ ಸಹಚರರ ವಿರುದ್ಧ FIR ದಾಖಲಾಗಿರುತ್ತದೆ. ಅವರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ವಿವೇಕ್ ಸುಬ್ಬಾರೆಡ್ಡಿ ಅವರು ಒತ್ತಾಯಿಸಿದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium