ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ನೌಕರರ ಸಂಘದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಹೆಚ್. ಆರ್. ಜಗದೀಶ್ ಅವರು ಮಾತನಾಡಿದರು.
ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಸಹ ಅವರಿಗೆ ಕರ್ತವ್ಯ ನಿರ್ವಹಿಸಲು ಘಟಕಗಳಲ್ಲಿ ನಿಯೋಜನೆ ಮಾಡದೆ ವಿಳಂಬ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ದಿನಾಂಕ: 14.02.2020 ರಂದು ನೇಮಕಾತಿ ಜಾಹಿರಾತು ಸಂಖ್ಯೆ: 01/2020 ಈ ಮೂಲಕ 2545 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿತ್ತು. ನಂತರ ಈ ಹುದ್ದೆಗಳಿಗೆ 2545 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ 2000 ಅಭ್ಯರ್ಥಿಗಳನ್ನು ಮಾತ್ರ ಘಟಕಗಳಿಗೆ ನಿಯೋಜನೆ ಮಾಡಿದ್ದು, ಉಳಿದ 545 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡದೆ ವಿಳಂಬ ಮಾಡಲಾಗುತ್ತಿದ್ದು, ಇದರ ಬಗ್ಗೆ ಈಗಾಗಲೇ ನಾವು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸಾರಿಗೆ ಸಚಿವರಿಗೆ ಹಾಗೂ ಕೆ.ಎಸ್.ಆರ್.ಟಿ.ಸಿ. ನಿಗಮ ಮಂಡಳಿಗೂ ಸಹ ನೂರಾರು ಅಭ್ಯರ್ಥಿಗಳು ಮನವಿ ಪತ್ರಗಳನ್ನು ಸಲ್ಲಿಸಿರುತ್ತೇವೆ. ಆದರೂ ಸಹ ಮೇಲ್ಕಂಡ 545 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡದೆ ವಿಳಂಬ ಧೋರಣೆ ಮಾಡುತ್ತಿದ್ದಾರೆ.
ಇದರಿಂದ ಆಯ್ಕೆಯಾಗಿರುವ ಅಭ್ಯರ್ಥಿಗಳ ವಯೋಮಿತಿಯು ನಿಗಧಿತ ವಯೋಮಿತಿಗಿಂತ ಹೆಚ್ಚಾಗುತ್ತಿದೆ. ಇದರಿಂದ ಆಯ್ಕೆಯಾಗಿರುವ ಪಟ್ಟಿಯಿಂದ ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಕೈಬಿಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮತ್ತು ನಾವು ಈ ಮೇಲ್ಕಂಡ ಸಂಸ್ಥೆಗೆ ಆಯ್ಕೆ ಯಾಗಿದ್ದರಿಂದಲೂ ಸಹ ಬೇರೆ ಯಾವುದೇ ಕೆಲಸಗಳಿಗೆ ಹೋಗಲು ಸಹ ಆಗುತ್ತಿಲ್ಲ. ಮತ್ತು ನಮ್ಮ ಕುಟುಂಬ ನಿರ್ವಹಣೆ ಮಾಡಲು ತುಂಬಾ ಕಷ್ಟಕರವಾಗಿರುತ್ತದೆ. ಈ ಎಲ್ಲಾ ಸಹ ಯಾವುದೇ ವಿಷಯಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿರುವುದಿಲ್ಲ. ಆದ್ದರಿಂದ ನಿಮ್ಮ ಈ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಸರ್ಕಾರದ ಗಮನ ಸೆಳೆಯಲು ಈ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ. ಮತ್ತು ಒಂದು ವೇಳೆ ಇದಕ್ಕೂ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಕೆ.ಎಸ್.ಆರ್.ಟಿ.ಸಿ.ಯ ಕೇಂದ್ರ ಕಛೇರಿಯ ಮುಂದೆ ಮೇಲ್ಕಂಡ ಎಲ್ಲಾ ಅಭ್ಯರ್ಥಿಗಳು ಸೇರಿ ಧರಣಿ ಸತ್ಯಾಗ್ರಹಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಈ ಮೂಲಕ ತಿಳಿಸಲು ಬಯಸುತ್ತೇವೆ. ಈ ಮೇಲ್ಕಂಡ ಎಲ್ಲಾ ವಿಷಯಗಳನ್ನು ನಿಮ್ಮ ಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ಭಿತ್ತರಿಸಿ ನಮಗೆ ನ್ಯಾಯ ರಾಜ್ಯದ ಎಲ್ಲಾ ಮಾದ್ಯಮವರದಿಗಾರರಿಗೂ ಮನವಿ ಒದಗಿಸಿಕೊಡಬೇಕೆಂದು ಈ ಮಾಡಿಕೊಳ್ಳುತ್ತೇವೆ.
Comments
Post a Comment