ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಹಾಗೂ ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ
ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಹಾಗೂ ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ ಬೆಂಗಳೂರು, ಡಿಸೆಂಬರ್ 27, 2025: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ದಿನಾಂಕ 30.12.2025 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಸ್ಥಳೀಯ ದೇವಸ್ಥಾನದ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ ಟಿಟಿಡಿ ಬೆಂಗಳೂರು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಕೆ. ವೀರಾಂಜನೇಯಲು ಅವರು "ವೈಕುಂಠ ಏಕಾದಶಿಯಂದು ಭಕ್ತರಿಗೆ ಸುಗಮ ಮತ್ತು ಅನುಕೂಲಕರ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಂದು ಬೆಳಗಿನ ಜಾವ 1.35 ರಿಂದ ರಾತ್ರಿ 11.45 ರ ವರೆಗೆ ನಿರಂತರ ದರ್ಶನಕ್ಕೆ ಅವಕಾಶವಿರುತ್ತದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರತಿ ಸಾಲಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪವಿತ್ರ ದಿನದಂದು ಆಗಮಿಸುವ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿನಿಯೋಗವಿರುತ್ತದೆ," ಎಂದು ತಿಳಿಸಿದರು. ಅಲ್ಲದೆ, ದೇವಸ್ಥಾನದ ಆವರಣದಲ್ಲಿ ಬೆಳಗಿನ ಜಾವ 2.00 ಗಂಟೆಯಿಂದ ಶ್ರೀವಾರಿ ಲಡ್ಡು ಪ್ರಸಾ...