ಬೆಂಗಳೂರು ಉತ್ತರ ಹಾಗೂ ದಕ್ಷಿಣ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ'ಭೂಸುರಕ್ಷಾ ಯೋಜನೆ'ಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಚಾಲನೆ ನೀಡಿದರು.

6 ತಿಂಗಳಲ್ಲಿ ಭೂ ದಾಖಲೆ ಡಿಜಿಟಲೀಕರಣ; 
ಉಪವಿಭಾಗಾಧಿಕಾರಿ ಕಚೇರಿಯ ದಾಖಲೆಗಳ ಸ್ಕ್ಯಾನಿಂಗ್‌ಗೆ ಚಾಲನೆ

ಬೆಂಗಳೂರು ನಗರ ಜಿಲ್ಲೆಯ ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಟಲೀಕರಣಗೊಳಿಸುವ ಭೂಸುರಕ್ಷಾ ಯೋಜನೆಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ನಗರದ ಕಂದಾಯ ಭವನದ ಬೆಂ. ಉತ್ತರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಉದ್ಘಾಟಿಸಿದರು. 

 ಈ ಕಾರ್ಯಕ್ರಮದಲ್ಲಿ ಪ್ರಿನ್ಸಿಪಲ್ ಸೆಕ್ರೆಟರಿ ರಾಜೇಂದ್ರ ಕುಮಾರ್ ಕಟಾರಿಯ, ಜಿಲ್ಲಾಧಿಕಾರಿ ಜಗದೀಶ್, ಎಡಿಸಿ ಜಗದೀಶ್ ನಾಯಕ್ ಮತ್ತಿತರ ಸಿಬ್ಬಂದಿ ಭಾಗಿಯಾಗಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರು, ಈಗಾಗಲೇ 62 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಿ ಪೋರ್ಟಲ್‌ಗೆ ಹಾಕಲಾಗಿದೆ. 70 కాలుళ్లకు రబీరియల్లి ಕೆಲಸ ಪೂರ್ಣ ಮುಗಿದಿದೆ. ಉಳಿದ ಕಡೆ ಆರು ತಿಂಗಳಲ್ಲಿ ಮುಗಿಯುವ ವಿಶ್ವಾಸವಿದೆ. ತಾಲ್ಲೂಕು ಕಚೇರಿಗಳಿಂದ 39,39,569 ಪುಟಗಳ ದಾಖಲೆಯನ್ನು ಜನರು ಆನ್‌ಲೈನ್ ಮೂಲಕವೇ ಪಡೆದುಕೊಂಡಿದ್ದಾರೆ' ಎಂದರು.

'ಈಗಾಗಲೇ ಅಪ್ಲೋಡ್ ಆಗಿರುವ ಉಪವಿಭಾಗಾಧಿಕಾರಿ ಕಚೇರಿಗಳಲ್ಲಿನ ಕಂದಾಯ ದಾಖಲೆಗಳ ಡಿಜಿಟಲೀಕರಣಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಚಾಲನೆ ನೀಡಿದರು.

ದಾಖಲೆಗಳ ನೈಜತೆ ಅರಿಯುವಂತೆ ಸುತ್ತೋಲೆ ಹೊರಡಿಸಲಾಗಿದೆ. ದಾಖಲೆ ಗಳ ತಿದ್ದುಪಡಿ, ನಕಲು ಮಾಡಿ ದಾಖಲೆ ಅಪ್ಲೋಡ್ ಮಾಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಆಗಲಿದೆ. ಅನುಮಾನಾಸ್ಪದ ಪ್ರಕರಣಗಳನ್ನು ಕೂಲಂಕಷವಾಗಿ ಆಗತ್ಯವಿದ್ದಲ್ಲಿ ಫೋರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. 

ಸಿದ್ದರಾಮಯ್ಯ ಅವರು ಜನನಾಯಕ ಅಷ್ಟೇ ಅಲ್ಲ, ಅತ್ಯುತ್ತಮ ಆಡಳಿತಗಾರ. ಅವರು ಹೆಚ್ಚು ದಿನ ಅಡಳಿತದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಎನ್ನುವ ದಾಖಲೆ ನಿರ್ಮಿಸಿರುವುದು ಯಾವುದೇ ನಾಯಕರಿಗೆ ಗೌರವ ತರುವಂತದ್ದು ಎಂದು, ಕೃಷ್ಣ ಬೈರೇಗೌಡ ಅವರು ಹೇಳಿದರು. 

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಆಯುಕ್ತರಾದ ಮೀನಾ ನಾಗರಾಜ್, ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತ ವೆಂಕಟರಾಜಾ, ಬೆಂಗಳೂರು ನಗರ ಜಿಲ್ಲಾಧಿಕಾರಿ జి. ಜಗದೀಶ್ ಉಪಸ್ಥಿತರಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium