ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ


ಬೆಂಗಳೂರು, ಮಾರ್ಚ್ 12, 2026: ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಹಿರಿಯ ನಟ, ರಂಗಭೂಮಿ ಕಲಾವಿದ ಡಿಂಗ್ರಿ ನಾಗರಾಜ್ ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಡುಗೋಡಿ ಶ್ರೀನಿವಾಸ್ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಗಂಡಸಿ ಸದಾನಂದ ಸ್ವಾಮಿ ಅವರು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, 79 ವರ್ಷ ವಯಸ್ಸಿನ ಡಿಂಗ್ರಿ ನಾಗರಾಜ್ ಅವರು 800 ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟಿಸಿದ್ದು, ಹತ್ತು ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಐದು ದಶಕಗಳಿಗೂ ಅಧಿಕ ಸಮಯದಿಂದ ಕಲಾವಿದರಾಗಿರುವ ಡಿಂಗ್ರಿ ನಾಗರಾಜ್, ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಕಲಾವಿದರಿಗೆ ನೆರವು ನೀಡಿದ್ದರು ಎಂದು ಮೆಚ್ಚುಗೆ ವ್ವಕ್ತಿಪಡಿಸಿದರು 
ಜೊತೆಗೆ ಚಲನಚಿತ್ರ ನಟ ಹಾಗೂ ನಿರ್ಮಾಪಕರಾದ ಗಣೇಶ್ ರಾವ್ ಕೆಸರ್ಕಾರ್ ಮತ್ತು ಹಿರಿಯ ನಟಿ ನವನೀತಂ ಅಭಿನಂದನೆ ಸಲ್ಲಿಸಿ, ಸಂಘದ ಅಭಿವೃದ್ಧಿಗೆ ನೂತನ ಪದಾಧಿಕಾರಿಗಳು ಮತ್ತಷ್ಟು ಸೇವೆ ಸಲ್ಲಿಸಲಿ ಎಂದು ಹಾರೈಸಿದ್ದಾರೆ.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium