ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ


ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಹಾಗೂ ವಿವಿಧ ದಲಿತ ಸಂಘಟನೆಗಳು ಒಳ ಮೀಸಲಾತಿ ರಹಿತ, ಹಳೆ ಮೀಸಲಾತಿಯ ಜಾರಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂದಿದ್ದರು. 

ಈ ಸಂದರ್ಭದಲ್ಲಿ ಕೈಗಾರಿಕೆ ಸಚಿವರಾದ ಎಂ. ಬಿ. ಪಾಟೀಲ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. 

ಬೃಹತ್ ಪ್ರತಿಭಟನಾ ಸಮಾವೇಶ ಸ್ಥಳದಲ್ಲಿ ಪರಮಪೂಜ್ಯ ಶ್ರೀ ಜ್ಞಾನಪ್ರಕಾಶ್ ಮಹಾಸ್ವಾಮಿಗಳು, ಸಮುದಾಯದ ಗುರುಗಳು ಹಾಗೂ ಹಿರಿಯರು ಸಚಿವರಿಗೆ ಮನವಿ ಸಲ್ಲಿಸಿದರು. 

ನಮ್ಮ ಸರ್ಕಾರ ಮತ್ತು ಪಕ್ಷವು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವಗಳಲ್ಲಿ ಅಚಲ ನಂಬಿಕೆ ಹೊಂದಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಮಾರ್ಚ್ 27, 2026 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಂಪುಟ ಸದಸ್ಯರೊಂದಿಗೆ ಸಂಪುಟ ಸದಸ್ಯರೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಎಲ್ಲರಿಗೂ ನ್ಯಾಯ ಒದಗಿಸುವ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಂ. ಬಿ. ಪಾಟೀಲ್ ಅವರು ತಿಳಿಸಿದರು. 

ಈ ವೇಳೆ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಬಿಬಿಎಂಪಿ ಮಾಜಿ ಮಹಾಪೌರರಾದ ಶ್ರೀ ಆರ್. ಸಂಪತ್ ರಾಜ್ ಅವರು ಉಪಸ್ಥಿತರಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium