ಬೆಂಗಳೂರಿನ ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಮಹಾಸಭಾ ವತಿಯಿಂದ 'ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ' ಕಾರ್ಯಕ್ರಮ ಆಯೋಜನೆ
ಬೆಂಗಳೂರು, ಮೇ 31, 2026 ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ವಿಶ್ವಕರ್ಮ ಸಮುದಾಯದ ಪಾತ್ರ ದೊಡ್ಡದು ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಹೇಳಿದ್ದಾರೆ. ಭಾನುವಾರ ಸಂಜೆ ಟೌನ್‌ಹಾಲ್‌ನಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಲಿಗಾಲದಲ್ಲಿ ಯಾರೂ ದೇವರನ್ನು ನೇರವಾಗಿ ನೋಡಿಲ್ಲ. ಆದ್ದರಿಂದ ವಿಗ್ರಹಗಳು ಪರಮಾತ್ಮನನ್ನು ನೋಡುವ ಅತ್ಯುತ್ತಮ ಮತ್ತು ಏಕೈಕ ಪರಿಯಾಗಿದೆ. ಅಂತಹ ವಿಗ್ರಹಗಳನ್ನು, ದೇವಾಲಯಗಳನ್ನು ನಿರ್ಮಾಣ ಮಾಡುವವರು ವಿಶ್ವಕರ್ಮ ಸಮುದಾಯದವರಾಗಿದ್ದಾರೆ. ಇದರಿಂದ ವಿಶ್ವಕರ್ಮರ ಸೇವೆ ಸಮಾಜಕ್ಕೆ ಕೊಡುಗೆಯಾಗಿದೆ ಎಂದು ಹೇಳಿದರು. ಸಮಾಜದ ಸಂಘಟನೆಗಾಗಿ ಕೆ.ಪಿ. ನಂಜುಂಡಿ ಹಲವು ವರ್ಷಗಳಿಂದ ಬಹಳ ಶ್ರಮಪಟ್ಟಿದ್ದಾರೆ. ಮುಜರಾಯಿ ಇಲಾಖೆಯ ಎ ಮತ್ತು ಬಿ ದರ್ಜೆ ದೇವಾಲಯಗಳ ವ್ಯವಸ್ಥಾಪನ ಸಮಿತಿಯಲ್ಲಿ ವಿಶ್ವಕರ್ಮರೊಬ್ಬರಿಗೆ ಸ್ಥಾನ ನೀಡುವ ಅವರ ಬೇಡಿಕೆಯನ್ನು ಈಗಾಗಲೇ ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗಿದೆ. ಅದನ್ನು ಪ್ರತ್ಯೇಕವಾಗಿ ಮತ್ತೊಮ್ಮೆ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುವುದು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಾರ್ಯಕ್ರಮದಲ್ಲಿ ಭರವಸೆ ನೀಡಿದರು. ಶಾಸಕ ಎಸ್.ಟಿ ಸೋಮಶೇಖರ್ ಮಾತನಾಡಿ, ವಿಶ್ವಕರ್ಮರು ರಾಜ್ಯದ ಪ್ರಮುಖ ಸಮಾಜವಾಗಿದ್ದಾ...