ಬೆಂಗಳೂರಿನ ಜಯನಗರದಲ್ಲಿ 'ರಕ್ಷಾ ಫೌಂಡೇಷನ್‌'ನಿಂದ 2 ಲಕ್ಷ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮ

ಬೆಂಗಳೂರು, ಜೂನ್ 20, 2026: 

ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 14ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮತ್ತು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಸಂಘ, ಸಂಸ್ಥೆಗಳಿಗೆ ದೇಣಿಗೆ, ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿಸೂರ್ಯ, ರಕ್ಷಾ ಫೌಂಡೇಷನ್‌ ಅಧ್ಯಕ್ಷ ಹಾಗೂ ಶಾಸಕ ಸಿ.ಕೆ.ರಾಮಮೂರ್ತಿ, ಶಾಸಕರುಗಳಾದ ಎಂ.ಕೃಷ್ಣಪ್ಪ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ, ಜಯದೇವ ಆಸ್ಪತ್ರೆ ನಿರ್ದಶಕ ಡಾ.ಜಿ.ದಿನೇಶ್, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ನಾಗರತ್ನ ರಾಮಮೂರ್ತಿ, ನಟಿ ತಾರಾ ಅನುರಾಧಾ ಮತ್ತಿತರರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಆರ್.ಅಶೋಕ್ ಮಾತನಾಡಿ, ಪ್ರತಿವರ್ಷ ರಕ್ಷಾ ಫೌಂಡೇಷನ್ ವತಿಯಿಂದ ಮಕ್ಕಳ ಶಿಕ್ಷಣಕ್ಕಾಗಿ ಉಚಿತ ನೋಟ್ ಪುಸ್ತಕ, ಲ್ಯಾಪ್‌ಟಾಪ್, ವಿದ್ಯಾರ್ಥಿ ವೇತನ ಪವಿತ್ರವಾದ ಕೆಲಸ ಮಾಡುತ್ತಿದ್ದಾರೆ ಎಂದರು.

ಸಿ.ಕೆ.ರಾಮಮೂರ್ತಿ ಮಾತನಾಡಿ, ಶಿಕ್ಷಣದಿಂದ ದೇಶ ಅಭಿವೃದ್ಧಿ, ವಿದ್ಯಾವಂತ ಸಮಾಜ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಕಳೆದ

14 ವರ್ಷಗಳಿಂದ ರಕ್ಷಾ ಫೌಂಡೇಷನ್ ಉಚಿತ ನೋಟ್ ಪುಸ್ತಕ, ಲ್ಯಾಪ್ ಟಾಪ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ರಕ್ಷಾ ಫೌಂಡೇಷನ್‌ ಮಕ್ಕಳ ಶಿಕ್ಷಣ ಮತ್ತು ಆರೋಗ್ಯ, ಪರಿಸರ ಉಳಿಸಿ ಬೆಳಸಲು ಶ್ರಮಿಸುತ್ತಿದೆ.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ, ತುಮಕೂರು, ತುರುವೆಕೆರೆ, ರಾಮನಗರ ವಿವಿಧ ಕಡೆಗಳಲ್ಲಿ 2 ಲಕ್ಷ ನೋಟ್ ಪುಸ್ತಕಗಳನ್ನು ವಿತರಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಜಯದೇವ ಆಸ್ಪತ್ರೆ ಮತ್ತು ಗೀತಾ ಎಜುಕೇಷನ್‌ ಸೊಸೈಟಿ, ವಾತ್ಸಲ್ಯಪುರಂ ಸೇವಾ ಸಂಸ್ಥೆಗಳಿಗೆ ದೇಣಿಗೆ ನೀಡಲಾಯಿತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium