ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಘಟಿಕೋತ್ಸವ ಆಯೋಜನೆ

ಬೆಂಗಳೂರು, ಜೂನ್ 10, 2026: 

   ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್‌ಐ)ಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಘಟಿಕೋತ್ಸವ ಆಯೋಜಿಸಲಾಗಿತ್ತು. 

ಪ್ರಜ್ವಲ್‌ ಕಶ್ಯಪ್ 'ಚಿನ್ನದ ಹುಡುಗ'ನಾಗಿ ಹೊರಹೊಮ್ಮಿದ್ದು 10 ಸುವರ್ಣ ಪದಕ್ಕೆ ಭಾಜನರಾದರು. 

ಬಿಎಂಸಿಆರ್‌ಐ ವ್ಯಾಸಂಗ ಮಾಡಿದ 259 ವಿದ್ಯಾರ್ಥಿಗಳು ಘಟಿಕೋತ್ಸವದಲ್ಲಿ ಪದವಿಗೆ ಭಾಜನರಾಗಿದ್ದು, ಇದರಲ್ಲಿ ಪ್ರಜ್ವಲ್ ಕಶ್ಯಪ್ ನಾಲ್ಕೂ ಹಂತದಲ್ಲಿ ಉನ್ನತ ಸ್ಥಾನ ಪಡೆದಿದ್ದು ಒಟ್ಟಾರೆ 10 ಚಿನ್ನದ ಪದಕಗಳನ್ನು ಸ್ವೀಕರಿಸಿದರು. 

ಮಿಂಟೋ ಆಸ್ಪತ್ರೆಯ ವೈದ್ಯೆಯಾದ ಡಾ.ಜೆ.ಟಿ.ಚಿನ್ಮಯಿ ಅವರು ಮೌಂಟ್ ಎವರೆಸ್ಟ್‌ ಏರಿದ್ದಕ್ಕಾಗಿ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಹುಬ್ಬಳ್ಳಿಯ ಕೆಎಂಸಿಆರ್‌ಐ ಮಾಜಿ ನಿರ್ದೇಶಕ ಡಾ.ವಸಂತ ಕಾಮತ್, ಬಿಎಂಸಿಆರ್‌ಐ ಮಾಜಿ ನಿರ್ದೇಶಕ ಡಾ.ಜಿ.ಟಿ.ಸುಭಾಶ್, ವೈದ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮೊಹಮದ್ ಮೊಹಿಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತ ರಾಥೋಡ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium