ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದ ಎಲ್ಲಾ ಐದು ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಬೆಂಗಳೂರು, ಜೂನ್ 18, 2026: 

ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಪರಿಷತ್‌ನ 7 ಸ್ಥಾನಗಳ ದೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಶಾಸಕರ ಅಡ್ಡ ಮತದಾನ ದಿಂದಾಗಿ ಕಾಂಗ್ರೆಸ್‌ನ ಐದೂ ಅಭ್ಯರ್ಥಿ ಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. 

ಕಾಂಗ್ರೆಸ್ ಪಕ್ಷದ ಬಿ. ಕೆ. ಹರಿಪ್ರಸಾದ್, ಪಿ.ವಿ. ಮೋಹನ್, ಬಿ.ಎಸ್.ಶಿವಣ್ಣ, ತಿಪ್ಪಣಪ್ಪ ಕಮಕನೂರ, ವಿನಯ್ ಕಾರ್ತಿಕ್ ಅವರು ಭರ್ಜರಿ ಜಯ ಗಳಿಸಿದ್ದಾರೆ.

ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ವಿಜಯ ಸಾಧಿಸಿದ್ದರೂ, ಅಡ್ಡ ಮತದಾನದ ಕಾರಣ ನಿರೀಕ್ಷೆಯಷ್ಟು ಮತ ಪಡೆಯುವಲ್ಲಿ ವಿಫಲರಾದರು. ಬಿಜೆಪಿಯ ಹೆಚ್ಚುವರಿ ಮತ ಸಿಕ್ಕಿಯೇ ಸಿಗುತ್ತದೆ ಎಂಬ ಖಾತರಿಯಲ್ಲಿ, ಗೆಲ್ಲಿಸಿಕೊಳ್ಳು ವಷ್ಟು ಸಂಖ್ಯಾಬಲ ಇರದಿದ್ದರೂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್‌ಗೆ ದೊಡ್ಡ ಹಿನ್ನಡೆಯಾಗಿದೆ.

ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳು ಗೆಲ್ಲುವುದು ನಿಕ್ಕಿಯಾಗಿತ್ತು. ಅದಕ್ಕೆ ಅಗತ್ಯವಿದ್ದ ಬೇರೆ ಪಕ್ಷಗಳ ಕೆಲವು ಮತಗಳು ಪಕ್ಷದ ಅಭ್ಯರ್ಥಿಗಳಿಗೆ ಬೀಳಬಹುದೆಂಬ ಲೆಕ್ಕಾಚಾರ ಇತ್ತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.