ಜಿಬಿಎ ಚುನಾವಣೆ ತಯಾರಿಗೆ ರಮೇಶ್ ಗೌಡರವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ


ಮುಂಬರುವ GBA ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ನಗರ ವಿಭಾಗದ ಕೆಆರ್ ಪುರಂ ವಿಧಾನಸಭಾ ಕ್ಷೇತ್ರ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ BLA1 ಮತ್ತು BLA2ಗಳ ಸಭೆಯು ಮಾಜಿ ಶಾಸಕರು ಹಾಗೂ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಶ್ರೀ ಹೆಚ್.ಎಂ. ರಮೇಶ್ ಗೌಡರವರ ಅಧ್ಯಕ್ಷತೆಯಲ್ಲಿ ಜರುಗಿತು. 


ಈ ಸಭೆಯನ್ನು ಕೆ ಆರ್ ಪುರ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಲಕ್ಷ್ಮಣ್. ಎಲ್.ರವರು ಮತ್ತು ಮಹದೇವಪುರ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಓ ಪಿ ಓಬಳೇಶ್ ರವರು ಆಯೋಜಿಸಿದ್ದರು. ಪಕ್ಷದ ವಕ್ತಾರರಾದ ಶ್ರೀ ಎಚ್ ಎನ್ ದೇವರಾಜ್ ರವರು ಮತದಾರರ ಪರಿಷ್ಕರಣೆ ಬಗ್ಗೆ ವಿವರಣೆ ನೀಡಿದರು. ಈ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಶೈಲಾ ಸಂತೋಜಿ ರಾವ್ ರವರು, ಗ್ರೇಟರ್ ಬೆಂಗಳೂರು ಮಹಾಪ್ರಧಾನ ಕಾರ್ಯದರ್ಶಿ ಶ್ರೀ ಎಸ್ ರಮೇಶ ರವರು, ಬೆಂಗಳೂರು ನಗರ ಪೂರ್ವ ವಿಭಾಗದ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಮಲ್ಲೇಶ್ವರಿ ರವರು, ಕೆಆರ್ ಪುರಂ ಕ್ಷೇತ್ರದ ಬಿಎಲ್ಎ-1 ಶ್ರೀ ಜಯಶೀಲ ಕುಮಾರ್ ರವರು, ಮಹದೇವಪುರ ಕ್ಷೇತ್ರದ ಬಿಎಲ್ಎ-1 ಶ್ರೀ ಕಾಂತರಾಜುರವರು, ಗ್ರೇಟರ್ ಬೆಂಗಳೂರು ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಶ್ರೀ ಅಫ್ರೋಜ್ ಬೇಗ್ ರವರು, ಸೇವಾದಳ ವಿಭಾಗದ ಅಧ್ಯಕ್ಷರಾದ ಶ್ರೀ ಪಿ ಮಹೇಶ್ ರವರು, ವಿದ್ಯಾರ್ಥಿ ವಿಭಾಗದ ಅಧ್ಯಕ್ಷರಾದ ಶ್ರೀ ಆದಿತ್ಯರವರು ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಹಲವಾರು ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium