ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಕೆಎಸ್‌ಜಿಇಎ ವತಿಯಿಂದ 'ನಮ್ಮಭಿಮಾನದ ಅಭಿನಂದನೆ ಕಾರ್ಯಕ್ರಮ' ಆಯೋಜನೆ: ಸಿ.ಎಸ್. ಷಡಕ್ಷರಿ


ಬೆಂಗಳೂರು, ಜುಲೈ 8, 2026:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ
ವತಿಯಿಂದ ಜುಲೈ 11ರಂದು ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವ‌ರ್ ಅವರಿಗೆ "ನಮ್ಮಭಿಮಾನದ ಅಭಿನಂದನೆ ಕಾರ್ಯಕ್ರಮ" ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ತಿಳಿಸಿದರು.

ಬುಧವಾರ ಕಬ್ಬನ್ ಪಾರ್ಕ್ ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಅಭಿನಂದನೆ ಸಲ್ಲಿಸುವಂತಹ ಕಾರ್ಯಕ್ರಮಗಳನ್ನು ನಮ್ಮ ಸಂಘದಿಂದ ನಿರಂತರವಾಗಿ ನಡೆಸಲಾಗುತ್ತಿದೆ. ಈ ಬಾರಿಯ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಾಹಸ್ವಾಮಿ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭಾಗಿಯಾಗಲಿದ್ದಾರೆ ಎಂದರು. 

ಅಭಿನಂದನಾ ಕಾರ್ಯಕ್ರಮದ ನಂತರ, 2026ನೇ ವರ್ಷದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ 10 ಜಿಲ್ಲೆಗಳ ಸುಮಾರು 3 ಸಾವಿರ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಪಿಎಸ್ ಸಮಿತಿಯಿಂದ ವರದಿ ಪಡೆದುಕೊಂಡು ನೂತನ ಪಿಂಚಣಿಯ ಯೋಜನೆಯ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ರಾಜ್ಯ ಸರ್ಕಾರಿ ನೌಕರರಿಗೆ ಮರುಜಾರಿಗೊಳಿಸುವುದು ಸೇರಿದಂತೆ ಕೇಂದ್ರ ಸರ್ಕಾರಿ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕಕರಿಗೂ ನೀಡುವ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಮಾಡಲಾಗುವುದು. ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಕುಟುಂಬದ ಹಿತದೃಷ್ಟಿಯಿಂದ ವೇತನ ಪಡೆಯುವ ಖಾತೆಯನ್ನು ಸಂಬಳ ಪ್ಯಾಕೇಜ್ ಖಾತೆಗೆ ಪರಿವರ್ತಿಸಿಕೊಂಡು ಬ್ಯಾಂಕ್‌ಗಳು ನೀಡುವ ಉಚಿತ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮನವಿ ಮಾಡಲಾಗುವುದು ಎಂದರು.

 ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆ‌ರ್ ಸಮೀಕ್ಷೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರನ್ನು ನಿಯೋಜಿಸಿದ್ದು, ವಾಸ್ತವಿಕ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯಗಡುವನ್ನು ನಿಗದಿಪಡಿಸಿ ನೌಕರರ ಮೇಲೆ ಅನಗತ್ಯ ಒತ್ತಡ ತಪ್ಪಿಸಬೇಕು, ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಅನಧಿಕೃತ ವ್ಯಕ್ತಿ ಅಥವಾ ಸಂಘಟನೆಯ ಹಸ್ತಕ್ಷೇಪವಾಗದರ ಅಲ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಬೇಕು, ಬಿ.ಎಲ್.ಓ ಹಾಗೂ ಇತರ ಸಿಬ್ಬಂದಿಯ ಸಭೆಗಳು ಮತ್ತು ಪರಿಶೀಲನಾ ಕಾರ್ಯಕ್ರಮಗಳನ್ನು ಕಚೇರಿ ವೇಳೆಯಲ್ಲಿಯೇ ನಡೆಸಬೇಕು, ಸರ್ಕಾರಿ ನೌಕರರ ಹಿತಾಸಕ್ತಿ, ಸಾರ್ವಜನಿಕ ಸೇವೆಯ ಗುಣಮಟ್ಟ ಹಾಗೂ ಚುನಾವಣಾ ಆಯೋಗದ ಕಾರ್ಯಗಳ ಸುಗಮ ಅನುಷ್ಠಾನದ ದೃಷ್ಟಿಯಿಂದ ಪರಿಗಣಿಸಿ, ಅಗತ್ಯ ಆದೇಶಗಳನ್ನು ಹೊರಡಿಸಬೇಕು ಎಂದು ಆಗ್ರಹಿಸಲಾಗುವುದು ಎಂದು ಸಿ.ಎಸ್‌. ಷಡಕ್ಷರಿ ಮಾಹಿತಿ ತಿಳಿಸಿದರು.


Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium