ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಿಕಾಸಶೀಲ ಇನ್ಸಾನ್ ಪಾರ್ಟಿ ಪದಾಧಿಕಾರಿಗಳಿಂದ ಮಹತ್ವದ ಸುದ್ದಿಗೋಷ್ಠಿ
ಬೆಂಗಳೂರು, ಆಗಸ್ಟ್ 31, 2026 ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮೇಲಿನ ತಾರತಮ್ಯ ನಿರಂತರವಾಗಿದೆ: ಮುಕೇಶ್ ಸಹಾನಿ ಬೆಂಗಳೂರು: ದೇಶದಲ್ಲಿ ಒಂದು ಸಂವಿಧಾನ ಮತ್ತು ಒಬ್ಬರೇ ಪ್ರಧಾನ ಮಂತ್ರಿ ಇದ್ದರೂ, ಅಲ್ಪಸಂಖ್ಯಾತ ಸಮುದಾಯ ಹಾಗೂ ವಿವಿಧ ಹಿಂದುಳಿದ ವರ್ಗಗಳ ಮೇಲೆ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಮುಕೇಶ್ ಸಹಾನಿ ಆರೋಪಿಸಿದರು. ಸೋಮವಾರ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ಮೀಸಲಾತಿ ವರ್ಗೀಕರಣದಲ್ಲಿ ಅಸಮಾನತೆ ಇದ್ದು, ಮಲ್ಲಾಹ್ ಮತ್ತು ಮೀನುಗಾರ ಸಮುದಾಯಗಳಡಿ ಸೇರ್ಪಡೆಯಾಗಿರುವ ಜನರಿಗೆ ದೇಶಾದ್ಯಂತ ಏಕರೂಪದ ಮೀಸಲಾತಿ ಸ್ಥಾನಮಾನ ಸಿಗಬೇಕು. ಹಿಂದುಳಿದ ಹಾಗೂ ತುಳಿತಕ್ಕೊಳಗಾದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ರಾಜಕೀಯ ಮತ್ತು ಸಾಮಾಜಿಕ ನ್ಯಾಯ ಸಿಗುವಂತಾಗಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಒಗ್ಗೂಡಿ ಹೋರಾಡಬೇಕಿದೆ ಎಂದರು. ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಗಳು ಮತ್ತು ಸಿದ್ಧಾಂತಗಳ ಹಾದಿಯಲ್ಲಿ ಸಾಗುವ ಮೂಲಕ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಹಾಗೂ ನ್ಯಾಯ ದೊರೆಯುವಂತೆ ಮಾಡುವುದು ನಮ್ಮ ಪಕ್ಷದ ಮುಖ್ಯ ಗುರಿಯಾಗಿದೆ. ಪ್ರಸ್ತುತ ರಾಜಕೀಯ ಕ್ಷೇತ್ರದಲ್ಲಿ ವ್ಯಾಪಾರೀಕರಣ ಹೆಚ್ಚಾಗುತ್ತಿದ್ದು, ಇದರಿಂದ ಶೋಷಿತ ಹಾಗೂ ಹಿಂದುಳಿದ ವರ್...