ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 3,200 ರೈತರಿಗೆ ನಿವೇಶನ ಹಂಚಿಕೆ

ಬೆಂಗಳೂರು, ಆಗಸ್ಟ್ 31, 2026

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸಿರುವ ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ 3,200 ರೈತರಿಗೆ ಪರಿಹಾರ ರೂಪದಲ್ಲಿ 18,399 ನಿವೇಶನ ಹಂಚಿಕೆ ಮಾಡಲಾಯಿತು. ಇದೇ ವೇಳೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಚಾಲನೆ ನೀಡಿದರು.

ನಗರದ ನೆಹರೂ ತಾರಾಲಯದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೂ ಮಾಲೀಕರಿಗೆ 3 ಕೋಟಿ ಚದರ ಅಡಿ ವಿಸ್ತೀರ್ಣದ ಜಾಗವನ್ನು * యు ఎ లో ఎం ఎ నో ಈ ಸಾಫ್ಟ್‌ವೇರ್ ಮೂಲಕ ಹಂಚಿಕೆ ಮಾಡ ಲಾಯಿತು. 20 ಭೂ ಮಾಲೀಕರಿಗೆ ಡಿ.ಕೆ. ಶಿವಕುಮಾ‌ರ್ ಅವರು ಸಾಂಕೇತಿಕ ವಾಗಿ ಹಂಚಿಕೆ ಪತ್ರ ವಿತರಿಸಿದರು. ಉಳಿದ ವರಿಗೆ ಕೌಂಟರ್‌ಗಳಲ್ಲಿ ವಿತರಿಸುವ ವ್ಯವಸ್ಥೆಮಾಡಲಾಗಿತ್ತು.

ನಿವೇಶನಗಳ ಹಂಚಿಕೆಗೆ ಸಾರ್ವಜನಿಕ-ರಿಂದ ಅರ್ಜಿ ಆಹ್ವಾನಿಸುವ ತಂತ್ರಾಂಶಕ್ಕೆ ವೆ. ಮುಖ್ಯಮಂತ್ರಿ ಚಾಲನೆ ನೀಡಿದರು. 26,000 ನಿಗದಿಪಡಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, 'ಮೂರು ವರ್ಷಗಳಿಂದಲೇ ಪರಿಹಾರ ನೀಡುವ ಪ್ರಯತ್ನ ಮಾಡಿ ಅರ್ಜಿಗಳನ್ನು ಕರೆಯಲಾಗಿತ್ತು. ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಶಿವರಾಮ ಕಾರಂತ ಬಡವಾಣೆಯ ಭೂ ಮಾಲೀಕರಿಗೆ ಪರಿಹಾರ ನೀಡುವುದು ತಡವಾಯಿತು. ನಿವೇಶನ ಹಂಚಿಕೆಗೆ ಅರ್ಜಿ ಹಾಕಲು ಆಹ್ವಾನ ನೀಡಲು ಮುಂದಾದಾಗ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರಿಂದ ಸರ್ಕಾರಕ್ಕೆ ಪ್ರತಿ ವರ್ಷ ₹1000 ಕೋಟಿ ನಷ್ಟವಾಗಿದೆ' ಎಂದು ತಿಳಿಸಿದರು.

'ಕೆಂಪೇಗೌಡರು ಕಟ್ಟಿದ ಬೆಂಗಳೂರಿ ನಲ್ಲಿ ಮಲ್ಲೇಶ್ವರ, ಚಾಮರಾಜಪೇಟೆ, ಜಯನಗರ, ಇಂದಿರಾನಗರದ ಸ್ವಲ್ಪ ಭಾಗ ಬಿಟ್ಟರೆ ಬೇರೆ ಪ್ರದೇಶಗಳು ಯೋಜಿತ ಬಡಾವಣೆಗಳಲ್ಲ. ಎಲ್ಲಿಯೂ ನೂರು ಅಡಿ ರಸ್ತೆಗಳಿಲ್ಲ. ಕೆಂಗಲ್ ಹನುಮಂತಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ 8 ಲಕ್ಷ ಇದ್ದ ಬೆಂಗಳೂರಿನ ಜನಸಂಖ್ಯೆ ಈಗ ಒಂದೂವರೆ ಕೋಟಿ ಆಗಿದೆ. 60 ಲಕ್ಷ ಜನ ನಿತ್ಯ ಬೆಂಗಳೂರಿಗೆ ಓಡಾಡುತ್ತಾರೆ ಎಂದರು.

ಬೆಂಗಳೂರು, ಕೋಲಾರ, ರಾಮನಗರ, ಚನ್ನಪಟ್ಟಣ, ತುಮಕೂರು, ಮಾಗಡಿ, ಕುಣಿಗಲ್, ಮದ್ದೂರು, ಮಂಡ್ಯದಿಂದ 30-50 ಸಾವಿರ ಜನರ ಬೆಂಗಳೂರು ಸೇರಿದ್ದಾರೆ. ಈಶಾನ್ಯ ರಾಜ್ಯಗಳಿಂದ 11 ಲಕ್ಷ ಜನ ಉದ್ಯೋಗ ಅರಸಿ ಬಂದಿದ್ದಾರೆ. 1.40 ಕೋಟ ವಾಹನಗಳಿವೆ. ರಸ್ತೆಗಳು ಮಾತ್ರ ಹಾಗೇ ಇವೆ. ಅಕ್ಕಪಕ್ಕದ ಕಟ್ಟಡಗಳನ್ನು ಒಡೆದು ಈ ರಸ್ತೆಗಳನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ' ಎಂದರು.

ಭೂಮಿ ಮಾರಾಟ ಮಾಡಬೇಡಿ: 'ರೈತರು ಅಲೆಯಬಾರದು, ಲಂಚ ಕೊಡಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಮ್ಮ ನಿವೇಶನಗಳನ್ನು ಭೂಮಿಯಲ್ಲಿಯೇ ಕೋರಿದವರಿಗೆ ಅಲ್ಲಿಯೇ ನೀಡಲಾಗುತ್ತಿದೆ. ಆದರೆ, ನಿವೇಶನಗಳನ್ನು ಮಾರಿಕೊಳ್ಳಬೇಡಿ. ಕಷ್ಟ ಎಲ್ಲರಿಗೂ ಬರುತ್ತದೆ. ನಂತರದ ದಿನಗಳಲ್ಲಿ ಈ ನಿವೇಶನಗಳ ಬೆಲೆ ನೀವು ಊಹಿಸಲು ಸಾಧ್ಯವಿಲ್ಲ' ಎಂದು ಶಿವಕುಮಾರ್ ಕಿವಿಮಾತು ಹೇಳಿದರು.

ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮಾತನಾಡಿ, '18 ವರ್ಷದ ಹಿಂದೆ ಭೂಮಿ ಕಳೆದುಕೊಂಡವರ ನೋವು ಅರ್ಥವಾಗುತ್ತದೆ. ರೈತರಿಗೆ ಸಿಗಬೇಕಾದ ನಿವೇಶನ ಸಿಗುತ್ತದೆ. ಯಾವುದೇ ಕಾರಣಕ್ಕೆ ಮಧ್ಯವರ್ತಿಗಳನ್ನು ಹತ್ತಿರಕ್ಕೆ ಸೇರಿಸಬೇಡಿ, ಪ್ರಾಧಿಕಾರವೇ ಮಧ್ಯಸ್ಥಿಕೆ ವಹಿಸಲಿದೆ. ಬಡಾವಣೆಗೆ ಜಮೀನು ಬಿಟ್ಟುಕೊಟ್ಟಿರುವ ರೈತರಿಗೆ 60:40 ಅನುಪಾತದಲ್ಲಿ ಪರಿಹಾರ ನೀಡಲಾಗುತ್ತಿದೆ. ಒಂದು ಎಕರೆ ಭೂಮಿ ಬಿಟ್ಟುಕೊಟ್ಟ ರೈತರಿಗೆ 9,583 ಚದರ ಅಡಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಸಾಧ್ಯವಾದಷ್ಟು ಅವರ ಸರ್ವೆ ನಂಬರ್‌ಗಳಲ್ಲಿಯೇ ನಿವೇಶನ ನೀಡಲು ಆದ್ಯತೆ ನೀಡಲಾಗಿದೆ. ಒಂದು ವೇಳೆ ಅಲ್ಲಿ ಸಾರ್ವಜನಿಕ ಮೂಲ-ಸೌಕರ್ಯಗಳಿದ್ದರೆ ಸಮೀಪದಲ್ಲಿ ನಿವೇಶನ ನೀಡಲಾಗುತ್ತದೆ' ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಮುನಿರಾಜು, ಬಿಡಿಎ ಮಾಜಿ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭಾಗವಹಿಸಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium