ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ 5ನೇ ಆವೃತ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

ಬೆಂಗಳೂರು, ಸೆಪ್ಟೆಂಬರ್ 2, 2026: 

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ-ಉಬುಂಟು ಸಂಸ್ಥೆಯು ಜಂಟಿಯಾಗಿ ಏರ್ಪಡಿಸಿದ್ದ 'ಒಗ್ಗಟ್ಟಾಗಿ ಬೆಳೆಯೋಣ' ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ 5ನೇ ಆವೃತ್ತಿಯನ್ನು ಬುಧವಾರ ಉದ್ಘಾಟಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. 

'ರಾಜಕೀಯ ಉದ್ದೇಶದಿಂದ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ, ಯೋಜನೆಯು ಜನರ ಸಮಯ, ಹಣವನ್ನು ಉಳಿಸಲಿದೆ' ಎಂದು ಪ್ರತಿಪಾದಿಸಿದರು.

'ನಗರದಲ್ಲಿ ಸಂಚಾರದಟ್ಟಣೆ ನಿವಾರಣೆಗೆ ರೂಪಿಸಿರುವ ಸುರಂಗ ರಸ್ತೆ ಯೋಜನೆಯ ಪರವಾಗಿ ಉದ್ಯಮಿಗಳು ದನಿ ಎತ್ತಬೇಕು' ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

'ಉದ್ಯಮಿಗಳಾಗಿರುವ ನೀವು, ಈ ಯೋಜನೆಯ ಪರವಾಗಿ ಧ್ವನಿ ಎತ್ತಬೇಕು. ನಗರವು ಬೃಹತ್ತಾಗಿ ಬೆಳೆಯುತ್ತಿದ್ದು, 1.4 ಕೋಟಿ ವಾಹನಗಳಿವೆ. ಸರ್ಕಾರವು ಬೆಂಗಳೂರಿನ ಸಂಚಾರ ವ್ಯವಸ್ಥೆ ಬಲಪಡಿಸುವ ಸಲುವಾಗಿ ಮೂಲಸೌಲಭ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿದೆ' ಎಂದು ತಿಳಿಸಿದರು.

'ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು. ಆಕೆಯ ತ್ಯಾಗ, ಹೋರಾಟಗಳು ಮಾದರಿಯಾಗಿವೆ. ಸವಾಲುಗಳನ್ನು ಮೆಟ್ಟಿ ಉದ್ದಿಮೆ ಕಟ್ಟಿರುವ ರಾಜ್ಯದ ಮಹಿಳೆಯರೂ ಮಾದರಿಯಾ-ಗಿದ್ದಾರೆ. ಗ್ರಾಮ ಪಂಚಾಯಿತಿಯಿಂದ ಸಂಸತ್ತಿನವರೆಗೆ ಮಹಿಳಾ ನಾಯಕತ್ವದ ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ' ಎಂದರು.

'ಉಬುಂಟು ಮೂಲಕ ಸಾವಿರಾರು ಕನಸುಗಳು ಒಂದಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಬೆಳೆಯಬೇಕು. ನೀವೆಲ್ಲರೂ ಉದ್ಯೋಗದಾತರೂ ಆಗಿದ್ದೀರಿ. ನಿಮಗೆ ಸರ್ಕಾರದ ಸಂಪೂರ್ಣ ಬೆಂಬಲವಿದೆ' ಎಂದರು.

'ಪ್ರಧಾನಿಯಾಗಲು ಎರಡು ಬಾರಿ ಸಿಕ್ಕ ಅವಕಾಶವನ್ನು ಎಐಸಿಸಿ ವರಿಷ್ಠರಾದ

ಸೋನಿಯಾಗಾಂಧಿ ತಿರಸ್ಕರಿಸಿದರು. ಅದು ಅವರ ತ್ಯಾಗದ ಪ್ರತೀಕ. ಅವರು ದೇಶವನ್ನು ಮುನ್ನಡೆಸುತ್ತಾರೆ. ಪುರಾಣಗಳಲ್ಲಿ ದೌಪದಿ ಹಾಗೂ ಕುಂತಿ ಮಹತ್ವದ ಪಾತ್ರಗಳು, ಶೇಕಡ 33 ರಷ್ಟು ಮೀಸಲಾತಿ ಇರುವುದರಿಂದ ಮಹಿಳೆಯರು ನಾಯಕ-ರಾಗುವುದನ್ನು ತಡೆಯುವುದು ಸಾಧ್ಯವಿಲ್ಲ' ಎಂದು ಹೇಳಿದರು.

ಏಷ್ಯಾ ಮತ್ತು ಪೆಸಿಫಿಕ್‌ಗಾಗಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗದ ದಕ್ಷಿಣ ಮತ್ತು ದಕ್ಷಿಣ-ಪಶ್ಚಿಮ ಏಷ್ಯಾ ಉಪ-ಪ್ರಾದೇಶಿಕ ಕಚೇರಿಯ ನಿರ್ದೇಶಕಿ ಮಿಕಿಕೊ ತನಕಾ, ಉಬುಂಟು ಸ್ಥಾಪಕ ಅಧ್ಯಕ್ಷೆ ಕೆ.ರತ್ನಪ್ರಭಾ, ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘದ ಅಧ್ಯಕ್ಷ ನಿಂಗಣ್ಣ ಎಸ್. ಬಿರಾದಾ‌ರ್, ಪೀಣ್ಯ ಇಂಡಸ್ಟ್ರೀಸ್ ಅಸೋಸಿಯೇಷನ್‌ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಎ.ವಿ. ಮತ್ತು ಇಂಡಿಯಾ ಹಿಟಾಚಿ ರೈಲ್ ಎಸ್‌ಟಿಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕೃಷ್ಣಪ್ಪ ಪಾಲ್ಗೊಂಡಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium