ಕೊಪ್ಪಳದ ಪ್ರಭಾವಿ ರಾಜಕಾರಣಿ ಶಂಭುಲಿಂಗನ ಗೌಡ ಪಾಟೀಲ್ ಹಲಗೇರಿ ಬಿಜೆಪಿಗೆ ಅಧಿಕೃತ ಸೇರ್ಪಡೆ

ಬೆಂಗಳೂರು, ಅಕ್ಟೋಬರ್ 12, 2026:

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಬಲ ವೃದ್ಧಿಗೆ ಪೂರಕ- ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೊಪ್ಪಳ ಜಿಲ್ಲೆಯ ಮುಖಂಡ ಶಂಭುಲಿಂಗನ ಗೌಡ ಪಾಟೀಲ್ ಹಲಗೇರಿ ಅವರ ನೇತೃತ್ವದಲ್ಲಿ ಅನೇಕ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. 
ಪಕ್ಷದ ಮೇಲೆ ವಿಶ್ವಾಸವಿಟ್ಟು ಪ್ರಧಾನಿ ನರೇಂದ್ರ ಮೋದಿಜೀ ಅವರ ಜನಪರ ಆಡಳಿತ, ನಾಯಕತ್ವವನ್ನು ಗಮನಿಸಿ ಪಕ್ಷ ಸೇರುತ್ತಿದ್ದು, ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಬಲ ವೃದ್ಧಿಸಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು.
 
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಲಪ್ಪ ಆಚಾರ್, ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ್, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್, ಮುಖಂಡರಾದ ಡಾ. ಬಸವರಾಜ್ ಕ್ಯಾವಟರ್, ಪ್ರಮುಖರು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಪರಿಚಯ: ಕೊಪ್ಪಳ ಜಿಲ್ಲೆ ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ 1966 ರಲ್ಲಿ ಜನಿಸಿದ, ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಅವರು ಶಿಕ್ಷಕ ವೃತ್ತಿ ಬದುಕಿನುದ್ದಕ್ಕೂ ಶಿಕ್ಷಣ, ಸಮಾಜ ಸೇವೆ, ಸಂಘ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು.
ಅನೇಕ ಶೈಕ್ಷಣಿಕ ಹಾಗೂ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಸುಮಾರು 30 ವರ್ಷಗಳ ಕಾಲ ಸಂಘಟನೆಯಲ್ಲಿ ತಮ್ಮನ್ನು ಸಕ್ರಿಯೆ ತೊಡಗಿಸಿಕೊಂಡ ಅವರು ಮೂರು ಬಾರಿ ಕೊಪ್ಪಳ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ, ನೌಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಇವರ ನಿಷ್ಕಲ್ಮಶ ಹಾಗೂ ಪ್ರಾಮಾಣಿಕ ಸೇವೆಯಿಂದಾಗಿ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದವರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium