'ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್ ಕೌನ್ಸಿಲ್' ಗೆ ಚಾಲನೆ ನೀಡಲಾಯಿತು.
ಬೆಂಗಳೂರು ಏಪ್ರಿಲ್ 26, 2025 : ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ 'ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್ ಕೌನ್ಸಿಲ್' (ಕೆಎಸ್ಎಎಚ್‌ಸಿ) ಹೊಸ ಕಚೇರಿಯನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಎಸ್ಎಎಚ್‌ಸಿ ಅಧ್ಯಕ್ಷ ಡಾ. ಯು.ಟಿ. ಇಫ್ತಿಕರ್ ಫರೀದ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್, ಚಿಕ್ಕಪೇಟೆ ಶಾಸಕ ಬಿ. ಉದಯ್ ಗರುಡಾಚಾರ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.